Breaking News

ಚೀನಾ-ಬೆಂಗಳೂರು ನಡುವೆ ವಿಮಾನ ಸಂಚಾರ ಬಂದ್..!

Spread the love

ಬೆಂಗಳೂರು, ಫೆ.4-ಕೊರೋನಾ ವೈರಸ್ ಭೀತಿಯಿಂದಾಗಿ ಚೀನಾ-ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಹಾಂಕಾಂಗ್, ಥೈಲ್ಯಾಂಡ್, ಸಿಂಗಪೂರ್ ನಡುವಿನ ಸಂಚಾರ ಮುಂದುವರೆದಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುತೇಕ ಕೊರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸುವುದನ್ನು ಕಡಿಮೆ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ ಆಗಮಿಸುತ್ತಿದ್ದವು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ನೇರವಾಗಿ ವಿಮಾನಗಳು ಸಂಚರಿಸುತ್ತಿದ್ದವು.

ಆದರೆ ಕೊರೋನಾ ವೈರಸ್‍ನ ಹರಡುವಿಕೆ ಹೆಚ್ಚಾಗಿದ್ದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಚೀನಾದಿಂದ ಬರುವ ಪ್ರತಿಯೊಬ್ಬರನ್ನೂ ಅತ್ಯಂತ ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲಾಗುತ್ತಿದೆ.

ಈವರೆಗೂ ಹಾಂಕಾಂಗ್‍ನಿಂದ ಬಂದ 402 ಮಂದಿ, ಥೈಲ್ಯಾಂಡ್‍ನಿಂದ ಬಂದ 2,324 ಮಂದಿ, ಸಿಂಗಪೂರ್‍ನಿಂದ ಬಂದ 1722 ಮಂದಿ, ಇನ್ನಿತರ ವಿಮಾನಗಳಲ್ಲಿ ಆಗಮಿಸಿದ 113 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ನಿನ್ನೆ ಒಂದೇ ದಿನ 19 ಮಂದಿಯನ್ನು ತಪಾಸಣೆಗೊಳಪಡಿಸಿರುವುದಾಗಿ ತಿಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ