Breaking News

ಅಥಣಿಯಲ್ಲಿ ಸರಣಿ ಅಪಘಾತ

Spread the love

ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ನಡುವೆ ಸರಣಿ ಅಪಘಾತವಾಗಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ