ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣ ಕೊನೆಗೊಳಿಲಿದೆ.
ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. ಈ ಪರಿಷ್ಕೃತ ಸೇವೆ ಜುಲೈ 5 ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಇದರ ಜೋಡಿ ರೈಲು, 07356 ಸಂಖ್ಯೆಯ ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು, ರಾಮೇಶ್ವರಂ ಬದಲಿಗೆ ರಾಮನಾಥಪುರಂನಿಂದ ಜುಲೈ 6 ರಿಂದ 27 ರವರೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.
ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 6.50ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ರಾಮನಾಥಪುರಂ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07356 ರಾಮನಾಥಪುರಂನಿಂದ ರಾತ್ರಿ 10ಕ್ಕೆ ಹೊರಟು, ಮರುದಿನ ಸಂಜೆ 7.40ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ. ಈ ರೈಲುಗಳು ತಮ್ಮ ಹಿಂದಿನ ಎಲ್ಲಾ ನಿಗದಿತ ನಿಲುಗಡೆ ನಿಲ್ದಾಣಗಳಲ್ಲಿ ನಿಲ್ಲಲಿವೆ.