Breaking News

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

Spread the love

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕಿರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ.

ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ.

ಆದ್ರೆ, ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್​ ಹೇಳಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ