Breaking News

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವ ಡ್ಯಾನ್ಸರ್​ಗಳು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

Spread the love

ನೆಲಮಂಗಲ(ಬೆಂ.ಗ್ರಾಮಾಂತರ): ಡ್ಯಾನ್ಸ್ ಇವೆಂಟ್​​ನ ಪೇಮೆಂಟ್ ಹಣ ತೆಗೆದುಕೊಂಡು ಬರುವಾಗ ಲಾರಿ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಡ್ಯಾನ್ಸರ್ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೆಲಮಂಗಲದ ಕುಣಿಗಲ್ ಬೈಪಾಸ್​ ಬಳಿ ಸೋಮವಾರ(ಇಂದು) ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತಪಟ್ಟವರು. ಇವರು ಕೆಲ ಸಿನಿಮಾಗಳಲ್ಲಿಯೂ ಡ್ಯಾನ್ಸರ್​​ಗಳಾಗಿ ಕೆಲಸ ಮಾಡಿದ್ದರು. ಹಲವು ಇವೆಂಟ್​​ಗಳಲ್ಲಿಯೂ ಜೋಡಿಯಾಗಿ ಡ್ಯಾನ್ಸ್ ಪ್ರದರ್ಶನ ನೀಡಿದ್ದರು.

ತುಮಕೂರಿನ ಕುಣಿಗಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರೂ, ವೇತನ ಪಡೆದುಕೊಂಡು ಬೈಕ್​ನಲ್ಲಿ ಬೆಂಗಳೂರಿನತ್ತ ಬರುತ್ತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

Spread the love ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ