Breaking News

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ: ಸಿ.ಎಂ ಸಿದ್ದರಾಮಯ್ಯ*

Spread the love

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ: ಸಿ.ಎಂ ಸಿದ್ದರಾಮಯ್ಯ*
*ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೆ ಚುನಾವಣೆಗೆ ನಿಲ್ಲಬಹುದು: ಸಿ.ಎಂ*
*ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ: ಸಿ.ಎಂ ಸಿದ್ದರಾಮಯ್ಯ*
ದಾವಣಗೆರೆ ಜೂ 16: ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.
ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು
ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ.
ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದರು.

Spread the love

About Laxminews 24x7

Check Also

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

Spread the love ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ