Breaking News

ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪ: ಐಶ್ವರ್ಯಾ ಗೌಡಗೆ ಷರತ್ತು ಬದ್ಧ ಜಾಮೀನು

Spread the love

ಬೆಂಗಳೂರು: ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೊಳಗಾಗಿದ್ದ ಐಶ್ವರ್ಯಾ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಐಶ್ವರ್ಯಾ ಗೌಡ ಪರ ವಾದ ಮಂಡಿಸಿದ್ದ ವಕೀಲ ಎಸ್. ಸುನೀಲ್ ಅವರು, “ಅನುಸೂಚಿತ ಪ್ರಕರಣವಲ್ಲದಿದ್ದರೂ ಇ.ಡಿ ಅಧಿಕಾರಿಗಳು ಐಶ್ವರ್ಯಾ ಗೌಡ ಅವರನ್ನು ಬಂಧಿಸಿದ್ದಾರೆ ಹಾಗೂ ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ” ಎಂದು ವಾದ ಮಂಡಿಸಿದ್ದರು.

‘ನಾನು ಡಿ. ಕೆ‌. ಸುರೇಶ್ ಅವರ ಸಹೋದರಿ, ನನಗೆ ಅನೇಕ ರಾಜಕೀಯ ನಾಯಕರ ಪರಿಚಯವಿದೆ’ ಎಂದು ನಂಬಿಸಿ ಸಾಲದ ರೂಪದಲ್ಲಿ ಚಿನ್ನ ಪಡೆದು ವಂಚಿಸಿದ ಆರೋಪ ಐಶ್ವರ್ಯಾ ಗೌಡ ವಿರುದ್ಧ ಕೇಳಿ ಬಂದಿತ್ತು. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್ ಐತಾಳ್ ಎಂಬುವವರು ನೀಡಿದ್ದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ. ಎನ್ ಹಾಗೂ ನಟ ಧರ್ಮೇಂದ್ರ‌ ಬಿ ಅವರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪದ ಮೇರೆಗೆ ಐಶ್ವರ್ಯಾ ಗೌಡ ವಿರುದ್ಧ ಪಿಎಂಎಲ್ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ)ಯಡಿ ಇ.ಡಿ ಅಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ಏಪ್ರಿಲ್ 25 ರಂದು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದರೆ 23 ರಂದು ವಿಚಾರಣೆಗೆ ಬರುವುದಾಗಿ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ