Breaking News

ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್

Spread the love

ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ.

ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಚಿಂತನೆ ನಡೆಸುತ್ತಿದೆ. ಈ ಹಿಂದೆ ಸರ್ಕಾರಿ ಇಲಾಖೆಗಳ ಮೇಲೆ ದಾಳಿ ನಡೆಸಲು ಮುಂದಾದಾಗ ಲೋಕಾಯುಕ್ತ ಅಧಿಕಾರಿಗಳೇ ದಾಳಿ ಬಗ್ಗೆ ಮಾಹಿತಿ ನೀಡಿ ದಾಳಿಯಿಂದ ತಪ್ಪಿಸಿಕೊಳ್ಳುವಂತೆ ಮಾಡುತ್ತಿದ್ದರು.‌ ಈ ಬಗ್ಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು‌. ಈ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದರು.ಇದರ ಮಧ್ಯೆ ಆರೋಪಿ‌ ನಿಂಗಪ್ಪ ಅಧಿಕಾರಿಗಳೊಂದಿಗೆ ಶಾಮೀಲಾಗಿ ಕಳೆದ ಆರು ತಿಂಗಳಿಂದ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ. ಇದೇ ಹಣವನ್ನು ಸಂಬಂಧಿಕರ ಹೆಸರಿನಲ್ಲಿ 13 ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿತ್ತು‌.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ