Breaking News

ಕೆಪಿಟಿಸಿಎಲ್​ನಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ: ಸಿಎಂ

Spread the love

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಿಎಂ, ನಿಗಮದಲ್ಲಿ ತೆರವಾಗಿರುವ 35 ಸಾವಿರ ಹುದ್ದೆಗಳನ್ನು ಹಂತ- ಹಂತವಾಗಿ ತುಂಬಲಾಗುವುದು.‌ ಜೊತೆಗೆ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಗಮದ‌‌ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರ ಎನ್​ಪಿಎಸ್​​ ಜಾರಿ ಮಾಡಿದೆ. ಆದರೆ, ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34 ಸಾವಿರ ಮೆಗಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ