Breaking News

ಅಂತರ್ಜಾತಿ ವಿವಾಹಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಪ್ರತಿಕ್ರಿಯೆ

Spread the love

ಬೆಳಗಾವಿ: ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಮತ್ತು ಜಾತಿ ಭೇದ ಭಾವ ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹಿಸುತ್ತಿದೆ. ಈ ರೀತಿ ಬೇರೆ ಜಾತಿಯ ವರ-ವಧು ಮದುವೆ ಆದಲ್ಲಿ ಅವರಿಗೆ ಸರ್ಕಾರ ಸಹಾಯಧನ ನೀಡಿ ಆರ್ಥಿಕ ಶಕ್ತಿ ತುಂಬುತ್ತಿದೆ.

ಅಂತರ್ಜಾತಿ ವಿವಾಹ ಎಂದರೆ ವಧು ಮತ್ತು ವರ ಬೇರೆ ಬೇರೆ ಜಾತಿಗೆ ಸೇರಿದವರಾಗಿರಬೇಕು. ಹೀಗೆ ಮದುವೆ ಆಗಿರುವ ಆ ದಂಪತಿಗೆ ಸಹಾಯಧನವನ್ನು 1989ರಿಂದ ಕರ್ನಾಟಕ ರಾಜ್ಯದಲ್ಲಿ ನೀಡಲಾಗುತ್ತಿದೆ. ಆರಂಭದಲ್ಲಿ 12 ಸಾವಿರ ರೂ. ಸಹಾಯಧನ ನೀಡಲಾಗುತ್ತಿತ್ತು. ಇದಾದ ಬಳಿಕ 25 ಸಾವಿರ ರೂ., 50 ಸಾವಿರ ರೂ., 1 ಲಕ್ಷ ರೂ., 2 ಲಕ್ಷ ರೂ. ಸಹಾಯಧನ ನೀಡುತ್ತಾ ಬರಲಾಗಿದೆ.

2018ರಿಂದ ಸಹಾಯಧನವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿ ಹುಡುಗನ ಮದುವೆ ಆದರೆ 3 ಲಕ್ಷ ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹುಡುಗ ಬೇರೆ ಜಾತಿ ಹುಡುಗಿಯನ್ನು ಮದುವೆಯಾದರೆ 2.5 ಲಕ್ಷ ರೂ. ಸಹಾಯಧನವನ್ನು ಸರ್ಕಾರ ಹೆಚ್ಚಿಸಿದ್ದು, ಆ ಪ್ರಕಾರವೇ ಸಹಾಯಧನ ಫಲಾನುಭವಿಗಳ ಕೈ ಸೇರುತ್ತಿದೆ. ಆ ಹಣವು ಫಲಾನುಭವಿಗಳ ಬದುಕಿಗೆ ನೆರವಾಗಿದ್ದು, ಉತ್ತಮ ಜೀವನ ಕಟ್ಟಿಕೊಳ್ಳುತ್ತಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎರಡು ಇಲಾಖೆಯಡಿ ಪ್ರತ್ಯೇಕವಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿ, ಹಣ ಮಂಜೂರು ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗೆ ಕಳೆದ 2019-20ರಿಂದ 2024-25ರ ವರೆಗೆ 747 ಫಲಾನುಭವಿಗಳಿಗೆ ಹಣ ಜಮೆ ಆಗಿದೆ. ಅದೇ ರೀತಿ ಪರಿಶಿಷ್ಟ ಪಂಗಡಕ್ಕೆ 299 ದಂಪತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಈವರೆಗೆ ಒಟ್ಟು 16 ಕೋಟಿ ಅನುದಾನ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ