Breaking News

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ

Spread the love

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ

ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ  (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ 31-5-2025ರ ಅವಧಿಯಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿ ಆದೇಶಿಸಲಾಗಿದ್ದು, ಪೂರ್ಣ ಪ್ರಮಾಣ ಮನೆ ಕಳೆದುಕೊಂಡವರಿಗೆ 1.20 ಲಕ್ಷ ರೂ ಹಾಗೂ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವಂತೆ ಸೂಚಿಸಲಾಗಿದೆ.

ಯಾವುದಕ್ಕೆ ಎಷ್ಟು ಪರಿಹಾರ

  • ಪೂರ್ಣ ಹಾನಿಯಾದ ಮನೆಗೆ ರೂ.1.20 ಲಕ್ಷ ರೂ. ಪರಿಹಾರ. ಜೊತೆಗೆ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಹಂಚಿಕೆ.
  • ಹೆಚ್ಚು ಪ್ರಮಾಣದ ಮನೆ ಹಾನಿ (ಶೇ 50% ಕ್ಕಿಂತ ಮೇಲ್ಪಟ್ಟು ಆಗೂ ಶೇ 75% ಕ್ಕಿಂತ ಕಡಿಮೆ), ಮನೆಯ ಗೋಡೆಗಳ ಕುಸಿತ ಹಾಗೂ ಮೇಲ್ಚಾವಣಿ ಹಾನಿಗೆ 50,000 ರೂ. ಪರಿಹಾರ.
  • ಅತೀ ಸಣ್ಣ ಪ್ರಮಾಣದ ಹಾನಿ (ಶೇ15% ಕ್ಕಿಂತ ಮೇಲ್ಪಟ್ಟು ಹಾಗೂ ಶೇ 20% ಕ್ಕಿಂತ ಕಡಿಮೆ), ಮನೆಯ ಮೇಲ್ಛಾವಣಿಯ ಹಂಚು/ಶೀಟುಗಳ, ಬಾಗಿಲು ಮತ್ತು ಕಿಟಕಿಗಳ ಹಾನಿ ಹಾಗೂ ಇನ್ನಿತರ ಸಣ್ಣ ಪುಟ್ಟ ಹಾನಿಗೆ- ರೂ 6,500.
  • ಮಧ್ಯಮ ಪ್ರಮಾಣ ಮನೆ ಹಾನಿ (ಶೇ 20%ಕ್ಕಿಂತ ಮೇಲ್ಪಟ್ಟು ಹಾಗೂ ಶೇ 50% ಕ್ಕಿಂತ ಕಡಿಮೆ), ಮನೆಯ ಗೋಡೆಗಳಲ್ಲಿ ಬಿರುಕು/ಸಣ್ಣ ಪ್ರಮಾಣದ ಕುಸಿತಕ್ಕೆ ರೂ 25,000ರೂ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ