ಬೆಂಗಳೂರು, ಜೂನ್ 19: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ (DK Suresh) ಆಯ್ಕೆ ಆಗಿದ್ದಾರೆ. ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದ್ದು, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಬಳಿಕ ವಿಶಾಂತ್ರಿ ಪಡೆದಿದ್ದರು, ಇದೀಗ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷ ಸ್ಥಾನದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ಹೇಳಿದ್ದಾರೆ.
ಹೈನುಗಾರಿಕೆ ಅಭಿವೃದ್ಧಿಗೆ ನಾನು ಹೆಚ್ಚಿನ ಗಮನ ಕೊಡುತ್ತೇನೆ. ಸರ್ಕಾರದ ಜೊತೆ ಚರ್ಚಿಸಿ ರೈತರಿಗೆ ಅನುಕೂಲ ಮಾಡುತ್ತೇನೆ. ನನ್ನ ಆಯ್ಕೆ ಮಾಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಒಟ್ಟು 14 ನಿರ್ದೇಶಕರನ್ನ ಒಳಗೊಂಡಿರೋ ಬಮೂಲ್, 11 ಜನ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದಾರೆ. ಈಗಾಗಲೇ ಡಿಕೆ ಸುರೇಶ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ನಿರ್ದೇಶಕ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಹೀಗಾಗಿ ಬೆಂಗಳೂರಿನ ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.
Laxmi News 24×7