Breaking News

ಸಕ್ಕರೆ ಕಾರ್ಖಾನೆಗಳಿಂದ ಬಿಲ್​​ ಪಾವತಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

Spread the love

ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಿಂದ ಬಿಲ್​​​ ಪಾವತಿಸುವಂತೆ ಒತ್ತಾಯಿಸಿ ರೈತರು ಇಲ್ಲಿನ ಜಿಲ್ಲಾಡಳಿತ ಭವನದೆದುರು ಗುರುವಾರ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವರ್ಷದಿಂದ ಸಕ್ಕರೆ ಕಾರ್ಖಾನೆಯವರು ಕಬ್ಬು ನುರಿಸಿದ ರೈತರ ಬಿಲ್ ಹಾಗೂ ಬಾಕಿ ಹಣ ಪಾವತಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತ ಮುಖಂಡರಾದ ಮುತ್ತಪ್ಪ ಕೋಮಾರ್, ಈರಣ್ಣ ಹಂಚಿನಾಳ ಹಾಗೂ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದರು.

ಜಿಲ್ಲಾಡಳಿತ ಭವನದೊಳಗೆ ಹೋಗಲು ಪೊಲೀಸರು ತಡೆಯೊಡ್ಡಿದ್ದರಿಂದ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ‌ ಸಂದರ್ಭದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ರೈತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಸರಿಸಿ ಒಳನುಗ್ಗಿದರು. ಜಿಲ್ಲಾಡಳಿತ ಭವನದ ಪ್ರಮುಖ ದ್ವಾರದಲ್ಲಿ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ಜಿಲ್ಲಾಧಿಕಾರಿ ಸಂಗಪ್ಪ ಎಂ., ಜಿಲ್ಲಾ ಪಂಚಾಯತ್​​​​​ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಕುರೇರ್ ಹಾಗೂ ಎಸ್.ಪಿ ಅಮರನಾಥ ರೆಡ್ಡಿ, ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಜಿಲ್ಲಾ ಪಂಚಾಯತ್​ ಮಿನಿ ಸಭಾಭವನದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದರು.

ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಮಾತನಾಡಿ, “ಜಿಲ್ಲೆಯ 13 ಸಕ್ಕರೆ ಕಾರ್ಖಾನೆಗಳ ಪೈಕಿ ನಾಲ್ಕು ಕಾರ್ಖಾನೆಯವರು ಮಾತ್ರ ಬಿಲ್ ನೀಡದೆ ಬಾಕಿ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಅವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ” ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ