Breaking News

ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

Spread the love

ಚಾಮರಾಜನಗರ : ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ದೇಶಿಪುರ ಕಾಲೋನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾಗಿರುವ ದುರ್ದೈವಿ. ಇಂದು ಮಧ್ಯಾಹ್ನ ಕಾಲೋನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಅವರ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದುಹಾಕಿದೆ. ಬಳಿಕ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು.

ಬಳಿಕ, ಗ್ರಾಮಸ್ಥರು ಹುಡುಕಾಡಿದ್ದರಿಂದಾಗಿ ಪುಟ್ಟಮ್ಮನ ಶವ ದೊರೆತಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಹುಲಿ ದಾಳಿ ನಡೆದಿದೆ.

ಈ‌ ಕುರಿತು ಬಂಡೀಪುರ ಸಿಎಫ್ಒ ಪ್ರಭಾಕರನ್ ಪ್ರತಿಕ್ರಿಯಿಸಿ, ‘ಮಹಿಳೆ ಹುಲಿ ದಾಳಿಗೆ ಮೃತಪಟ್ಟಿರುವುದು ದೃಢಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಎರಡನೇ ಪ್ರಕರಣ : ಕಳೆದ 10 ರಂದು ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ಬಹಿರ್ದೆಸೆಗೆಂದು ತೆರಳಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿ ದೇಹದ ಅಲ್ಪಸ್ವಲ್ಪ ತಿಂದಿತ್ತು. ಬಳಿಕ, ಬಿಆರ್​​ಟಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಲವೇ ತಾಸುಗಳಲ್ಲಿ ಹುಲಿ ಸೆರೆ ಹಿಡಿದಿದ್ದರು


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ