Breaking News

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…

Spread the love

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…

ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ

ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು.

ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. 2025ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ಯ ಜೂನ್ 22 ರಂದು ಬೆಳಗಾವಿಯ ಇತಿಹಾಸದಲ್ಲೇ ಬೃಹತ್ ಸೂರ್ಯ ನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಮರಾಠ ಮಂಗಲ ಕಾರ್ಯಾಲಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 8 ವರ್ಷದಿಂದ 60 ವರ್ಷ ಮೇಲ್ಪಟ್ಟವರು ಹೀಗೆ 6 ವಿಭಾಗದಲ್ಲಿ ಸುಮಾರು 600 ಸಾಧಕರು ಭಾಗಿಯಾಗಲಿದ್ದಾರೆ. 24 ಬಹುಮಾನಗಳು ಮತ್ತು ಅತಿ ಹೆಚ್ಚು ಸೂರ್ಯನಮಸ್ಕಾರ ಮಾಡಿದವರಿಗೆ ಚಾಂಪಿಯನ್ಸ್ ಆಫ್ ಚಾಂಪಿಯನ್ಸ್ ನೀಡಿ ಗೌರವಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ವೈಭವ ವೇರ್ಣೆಕರ, ಜಂಟಿ ಕಾರ್ಯದರ್ಶಿ ವಿಶ್ವನಾಥ, ಖಜಾಂಚಿಗಳಾದ ಎಂ.ಐ ಪಾಟೀಲ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ