Breaking News

ಬೆಳ್ಳಂಬೆಳಗ್ಗೆ ಕೊರೊನಾ ಸೋಂಕಿತ ಕಳ್ಳ ಆಸ್ಪತ್ರೆಯಿಂದ ಎಸ್ಕೇಪ್!

Spread the love

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ (ರೋಗಿ-14,537) ಎಸ್ಕೇಪ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಉಪನಗರ ಠಾಣೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿತನಾಗಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 5:30ಕ್ಕೆ ಕಿಮ್ಸ್ ಕೋವಿಡ್ ವಾರ್ಡಿನಿಂದ ಎಸ್ಕೇಪ್ ಆಗಿದ್ದಾನೆ. ಸೋಂಕಿತ ವ್ಯಕ್ತಿ ಕಿಮ್ಸ್ ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇಬ್ಬರು ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಖದೀಮ ಎಸ್ಕೇಪ್ ಆಗಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ಜನರಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ. ಉಪನಗರ ಠಾಣಾಧಿಕಾರಿ, ಕಿಮ್ಸ್ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪರಾರಿಯಾದ ಸೋಂಕಿತನ ಪತ್ತೆಗೆ ಪೊಲೀಸರು ಬಲೆ ಬಿಸಿದ್ದು, ಎಲ್ಲೆಡೆಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ