Breaking News

ಕೇಂದ್ರ ವಿತ್ತ ಸಚಿವೆ – ಸಿಎಂ ಭೇಟಿ; ಬೆಳವಣಿಗೆಗೆ ಪೂರಕವಾಗಿರುವ ವಿಧಾನ ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಸೂಚಿಸುವಂತೆ ಸಿಎಂ ಮನವಿ

Spread the love

ನವದೆಹಲಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕಕ್ಕೆ ಪ್ರತಿಪಾದಿಸುವಂತೆ ವಿನಂತಿಸಿದರು.

15ನೇ ಹಣಕಾಸು ಆಯೋಗ ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಬಗ್ಗೆ ಸಿಎಂ ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದರು. ಜೊತೆಗೆ, 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನ ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿರುವುದನ್ನು ತಿಳಿಸಿದ್ದಾರೆ.

ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ: 15ನೇ ಹಣಕಾಸು ಆಯೋಗ ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸೂತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15 ನೇ ಹಣಕಾಸು ಆಯೋಗ ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ