Breaking News

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ:

Spread the love

ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

1. ರೈಲು ಸಂಖ್ಯೆ 22231 ಕಲಬುರಗಿ – ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ಶುಕ್ರವಾರ ಹೊರತುಪಡಿಸಿ) ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.

2. ರೈಲು ಸಂಖ್ಯೆ 20703 ಕಾಚಿಗುಡ – ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ಬುಧವಾರ ಹೊರತುಪಡಿಸಿ) ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

3. ರೈಲು ಸಂಖ್ಯೆ 22232 ಎಸ್‌ಎಂವಿಟಿ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಗುರುವಾರ ಹೊರತುಪಡಿಸಿ) ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ಮಾರ್ಗವಾಗಿ ಸಂಚರಿಸಲಿದೆ.

ಮಾರ್ಗ ಬದಲಾವಣೆಯ ಅವಧಿಯಲ್ಲಿ, ಮೇಲೆ ತಿಳಿಸಿದ ಯಾವುದೇ ರೈಲುಗಳ ನಿಲುಗಡೆಗಳನ್ನು ಬಿಟ್ಟುಬಿಡುವುದಿಲ್ಲ. ಎಲ್ಲಾ ನಿಗದಿತ ನಿಲುಗಡೆಗಳನ್ನು ನಿರ್ವಹಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ