Breaking News

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

Spread the love

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 25 ರಂದು (ಬುಧವಾರ) ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ಸೋಮವಾರ ಸಾಯಂಕಾಲ ಬೆಳಗಾವಿಯಲ್ಲಿ ಶುರುವಾದ ಮಳೆ ರಾತ್ರಿಯಿಡೀ ಸುರಿಯಿತು. ಇಂದೂ ಸಹ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜೂ.25ರಂದು ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಪಾಲಿಕೆ ಆಯುಕ್ತರ ಸಿಟಿ ರೌಂಡ್: ಬೆಳಗಾವಿ ನಗರದಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಚರಂಡಿಗಳು ತುಂಬಿ ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹಾಗಾಗಿ, ತಕ್ಷಣ ತಮ್ಮ ಸಿಬ್ಬಂದಿ ಜೊತೆಗೆ ಫೀಲ್ಡಿಗಿಳಿದ ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ ಅವರು ಪರಿಸ್ಥಿತಿ ಅವಲೋಕಿಸಿದರು. ಸುರಿಯುವ ಮಳೆಯಲ್ಲೇ ಕೊಡೆ ಹಿಡಿದುಕೊಂಡು ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುತ್ತಿದ್ದೇವೆ. ಒಳ ಚರಂಡಿಗಳ ಸ್ವಚ್ಛತೆಗಾಗಿ ಹಾಗೂ ನಾಲಾಗಳ ನಿಯಮಿತ ಸ್ವಚ್ಛತೆಗಾಗಿ ಮೂರು ಜೆಸಿಬಿ, ಎರಡು ಜಟ್ಟಿಂಗ್ ಮತ್ತು ಸಕ್ಕಿಂಗ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಯಾವುದೇ ಸಮಸ್ಯೆ ಬಂದಲ್ಲಿ ತುರ್ತಾಗಿ ಸ್ಪಂದಿಸಲಾಗುವುದು ಎಂದು ಶುಭ ಬಿ. ತಿಳಿಸಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ