Breaking News

ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ

Spread the love

ದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ತಿಮ್ಮಕ್ಕ(60), ಯಶೋಧಾ(33) ಮೃತಪಟ್ಟ ದುರ್ದೈವಿಗಳು. ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ.

ಅಷ್ಟೇ ಅಲ್ಲ ಮುಂದಿದ್ದ ಕಾಂಪೌಂಡ್​ಗೆ ಕಾರು ಡಿಕ್ಕಿಯಾಗಿದೆ. ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ಮೃತಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.

ಮೃತಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅಪಘಾತ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ