Breaking News

ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ

Spread the love

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್​ ಮರ್ಡರ್​ನಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ಪಟ್ಟಣ ಗ್ರಾಮದ ಬಳಿ ಇರುವ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಘಟನೆಗೆ ಹಳೆ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್‌ಅರ್ಬನ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಸಬ್‌ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ

Spread the loveಬಾಗಲಕೋಟೆ, (ಜುಲೈ 22): ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ