Breaking News

ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love

ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ
ರಾಯಬಾಗ: ಸಂಸದೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 25 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು.
ಚಿಕ್ಕೋಡಿ ಲೋಕಸಭೆ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಎಸಿಪಿ, ಟಿಎಸ್‌ ಪಿ ಯೋಜನೆಯಡಿ ಎಸ್ಸಿ ಕಾಲೋನಿಯಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕೆಂಬ ಉದ್ಧೇಶದಿಂದ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದ ಅವರು, ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡಾಪಟುಗಳು ರಾಷ್ಟ್ರೀಯ-ಅಂತರಾಷ್ಟ್ರೀ ಮಟ್ಟದಲ್ಲಿ ಮಿಂಚಲು ಅನುಕೂಲವಾಗಲಿದೆ. ಹಿರಿಯರ ಮಾರ್ಗದರ್ಶನ ಪಡೆದು, ಕ್ರೀಡೆಗೆ ಬೇಕಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮತದಾರರ ಆಶೀರ್ವಾದಿಂದ ಮೊದಲ ಸಲ ಚಿಕ್ಕೋಡಿ ಕ್ಷೇತ್ರದಿಂದ ಸಂಸದೆಯಾಗಿರುವೆ. ಈ ಭಾಗದ ಮನೆ ಮಗಳಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಹೀಗಾಗಿ ಕ್ರೀಡಾ, ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಪಡಿಸಲು ನಿರಂತರ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ರಾಯಬಾಗ ವಿಧಾನಸಭಾ ಕ್ಷೇತ್ರದ ನಸಲಾಪುರ, ಬಾವನ-ಸವದತ್ತಿ, ನಸಲಾಪೂರ, ಕರೋಶಿ ಬಂಬಲವಾಡ ಗ್ರಾಮಗಳಲ್ಲಿ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ನಿರ್ಮಾಣಕ್ಕೆ ತಲಾ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಹಾಗೂ 3 ಕೋಟಿ ರೂ. ವೆಚ್ಚದಲ್ಲಿ ಬಂಬಲವಾಡದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿವರೆಗೆ ಕುಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ, ಮುಖಂಡರಾದ ರಾಮಪ್ಪ ಪೂಜಾರಿ, ಸುರೇಶ ಶಾಮ್ ರೇವಡೆ, ಶಂಕರ್ ಗೌಡ ಪಾಟೀಲ್ , ವೃಷಭ ಪಾಟೀಲ್ , ವಿನಯ ಕುಂಬಾರ , ರುದ್ರಪ್ಪ ಸಂಗಪ್ಪಗೊಳ , ರಾಜು ಕೊಟ್ಟಿಗೆ , ಅರುಣ ನರಗುಂದೆ, ಶಿವು ಪಾಟೀಲ, ಕೃಷ್ಣ ಜುಗಳೆ, ಸಂಜಯ್ ಕಾಂಬ್ಳೆ, ಚೇತನ್ ಹೊನ್ನಗೊಳ ಹಾಗೂನ ಗ್ರಾಮಸ್ಥರು ಇತರರು ಇದ್ದರು

Spread the love

About Laxminews 24x7

Check Also

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the loveಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ