Breaking News

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಬಿ.ಆರ್.ಪಾಟೀಲ್

Spread the love

ಬೆಂಗಳೂರು: ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅಳಂದ ಕ್ಷೇತ್ರದ ಶಾಸಕ ಬಿ.ಆರ್‌.ಪಾಟೀಲ್‌, ಕಾಗವಾಡ ಕ್ಷೇತ್ರದ ರಾಜು ಕಾಗೆ ಅವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ರಾಜು ಕಾಗೆ: ನವದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು, ಶಾಸಕರನ್ನು ಕರೆಸಿ ಚರ್ಚೆ ನಡೆಸಿದ್ದಾರೆ. ಮೊದಲಿಗೆ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಶಾಸಕ ರಾಜು ಕಾಗೆ ಅವರು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿ ತಮ್ಮ ಕ್ಷೇತ್ರದಲ್ಲಿ ನಡೆದಿರುವ ಮತ್ತು ನಡೆಯದಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸಚಿವರು ಹಾಗೂ ಅಧಿಕಾರಿಗಳ ನಡವಳಿಕೆಗೆ ಬಗ್ಗೆ ಸಿಎಂಗೆ ರಾಜು ಕಾಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ
ಅಳಂದ ಶಾಸಕ ಬಿ.ಆರ್. ಪಾಟೀಲ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, ವಸತಿ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಸೇರಿದಂತೆ ಕೆಲ ಮಾಹಿತಿಗಳನ್ನು ಸಿಎಂಗೆ ಬಿ.ಆರ್.ಪಾಟೀಲ್ ನೀಡಿದ್ದಾರೆ.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ