Breaking News

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…

Spread the love

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು….
ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಜೀವಗಾಂಧಿ ನಗರದ ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಯವರು ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಶುಭ ಹಾರೈಸಿದ್ದಾರೆ.‌
ಜಿಲ್ಲೆಯಾದ್ಯಂತ ಈ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗರ್ಭಿಣಿಯರಿಗೆ ಉಡಿ ತುಂಬಿ ಆರತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗರ್ಭಿಣಿಯರು ಯಾವೆಲ್ಲ ಪೌಷ್ಟಿಕ ಆಹಾರ ಸೇವಿಸಬೇಕು? ಅವರು ಅನುಸರಿಸಬೇಕಾದ ಆರೋಗ್ಯ ಕ್ರಮಗಳೇನು? ಎಂಬೆಲ್ಲ ಮಾಹಿತಿಯನ್ನು
ಈ ಕಾರ್ಯಕ್ರಮದ ಮೂಲಕ ತಿಳಿಸಿಕೊಡಲಾಯಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗರ್ಭಿಣಿಯರಿಗೆ ಉಡಿ ತುಂಬಿ ಆರತಿ ಬೆಳಗಿದ್ದು ಇಲ್ಲಿ ವಿಶೇಷವಾಗಿತ್ತು. ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ, ಡಿಎಚ್‌ಓ ಡಾ.ಎಸ್.ಎಂ.ಹೊನಕೇರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ