ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ
ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಬಳಿ ನಡೆದಿದೆ. ವ್ಯಕ್ತಿ ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆಗಿದೆ.
Laxmi News 24×7