Breaking News

ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಲು ಜು. 1 ರಿಂದ ಇ- ಖಾತಾ ಕಡ್ಡಾಯ: ಇ- ಖಾತಾ ಪಡೆಯಲು ಬೇಕಿರುವ ದಾಖಲೆಗಳೇನು?

Spread the love

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ ) ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಜುಲೈ 1 ರಿಂದ ‘ಇ-ಖಾತಾ’ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನಗರ ಹಾಗೂ ಗ್ರಾಮೀಣ ಭಾಗದ ಜನರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬುವ ಹಾಗೂ ಆಸ್ತಿ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸಿ, ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷದ ಅಂತ್ಯದಲ್ಲಿ ಇ-ಖಾತಾ ವ್ಯವಸ್ಥೆಯ ಮೂಲಕ ಮಹತ್ವದ ಹೆಜ್ಜೆ ಇಟ್ಟಿತ್ತು.

ಇ-ಖಾತಾ ಆಸ್ತಿ ಮಾಲೀಕರಿಗೆ ಒಂದೇ ಕಡೆ ಡಿಜಿಟಲ್ ವೇದಿಕೆಯನ್ನು ಕಲ್ಪಿಸುವ ಮೂಲಕ ಆಸ್ತಿ ವಹಿವಾಟುಗಳನ್ನು ಸುಲಭ, ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತಗೊಳಿಸುವ ಗುರಿಯನ್ನು ಹೊಂದಿದೆ.

ಆಸ್ತಿ ದಾಖಲೆಗಾಗಿ ಅರ್ಜಿ ಸಲ್ಲಿಸುವಿಕೆ, ತೆರಿಗೆ ಪಾವತಿಸುವಿಕೆ ಅಥವಾ ದಾಖಲೆಗಳನ್ನು ಪರಿಶೀಲಿಸುವಿಕೆ ಎಲ್ಲವೂ ಇ-ಖಾತಾ ಆನ್ ಲೈನ್​ನಲ್ಲಿ ಲಭ್ಯವಿದೆ. ಇದರ ಪರಿಣಾಮದಿಂದಾಗಿ ಇದೀಗ ಜನಸಾಮಾನ್ಯರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಕಾಗದ ಪತ್ರಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ.

ನಗರದಲ್ಲಿ ಆಸ್ತಿಗಳ ಇ-ಖಾತಾ ದಾಖಲೆ ವಿತರಣೆ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಜೂನ್ 29 ರಂದು ಬೃಹತ್ ಇ-ಖಾತಾ ಮೇಳ ಹಾಗೂ ಮನೆ ಮನೆಗೆ ತೆರಳಿ ಇ-ಖಾತಾ ಡ್ರಾಫ್ಟ್ ವಿತರಣಾ ಕಾರ್ಯಕ್ರಮಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಇ-ಖಾತಾ ಪಡೆಯುವುದನ್ನು ಕಡ್ಡಾಯ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ನೀಡುವ ರೀತಿಯಲ್ಲಿ ನಗರ ಪ್ರದೇಶದ ಮಾಲೀಕರಿಗೆ ಇ-ಖಾತಾ ನೀಡಲಾಗುತ್ತದೆ. ಇ-ಖಾತಾ ಪಡೆಯಲು ಅರ್ಜಿದಾರರು ಯಾವ ಕ್ರಮಗಳನ್ನು ಅನುಸರಿಸಬೇಕು ಮತ್ತು ಇ-ಖಾತಾ ಪಡೆಯಲು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು ಹಾಗೂ ಇ-ಖಾತಾ ಪಡೆಯುವುದರಿಂದಾಗುವ ಉಪಯೋಗ ಏನು? ಎಂಬುದರ ವಿವರ ಇಲ್ಲಿದೆ..


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ