ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಮಂಗಳೂರು (ದಕ್ಷಿಣ ಕನ್ನಡ) : ನಿವೃತ್ತರಾದ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕರ್ತವ್ಯ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಇವರು ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ನ ಮೇಲಿನ ಪ್ರೀತಿಗೆ ಬ್ಯಾಂಕ್ಗೆ ಬಂದು ಹೋಗುತ್ತಿದ್ದರು. ಅದೇ ರೀತಿ ನಿನ್ನೆ ಬ್ಯಾಂಕ್ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಈ ಹಿನ್ನೆಲೆ ಗಿರಿಧರ್ ಅವರ ಪತ್ನಿ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ದೂರು ದಾಖಲಿಸಿದ್ದರು.
ಇಂದು ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ನ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laxmi News 24×7