Breaking News

ಎಸ್ ಪಿ ಲಕ್ಷ್ಮಣ ನಿಂಬರಗಿಯವರಿಗೆ ಪುಸ್ತಕದ ಕಾಣಿಕೆ ನೀಡಿ ಅಭಿನಂದಿಸಿದ ಸಚಿವ ಎಂ.ಬಿ.ಪಾಟೀಲ

Spread the love

ಎಸ್ ಪಿ ಲಕ್ಷ್ಮಣ ನಿಂಬರಗಿಯವರಿಗೆ ಪುಸ್ತಕದ ಕಾಣಿಕೆ ನೀಡಿ ಅಭಿನಂದಿಸಿದ ಸಚಿವ ಎಂ.ಬಿ.ಪಾಟೀಲ
ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ನಡೆದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಡಕಾಯಿತಿ ಪ್ರಕರಣವಾಗಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.
ಇದನ್ನು ಬೇಧಿಸುವಲ್ಲಿ ಯಶಸ್ವಿಯಾದ ವಿಜಯಪುರ ಪೊಲೀಸರ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಶ್ಲಾಘಿಸಿದ್ದಾರೆ.
ವಿಜಯಪುರ ಜಿಲ್ಲೆಯ ಪೋಲಿಸ್ ಅಧಿಕಾರಿಗಳು ತಮ್ಮ ಚುರುಕಿನ ಕಾರ್ಯಾಚರಣೆಯಿಂದ ರಾಜ್ಯದ ಜನತೆಯ ನಂಬಿಕೆಗೆ ಧಕ್ಕೆಯುಂಟಾಗದಂತೆ ಮಾಡಿದ್ದಾರೆ. ಪ್ರಕರಣವನ್ನು ತಿಂಗಳ ಅವಧಿಯಲ್ಲಿಯೇ ಬೇಧಿಸಿ. ಸೀನಿಯರ್ ಮ್ಯಾನೇಜರ್ ಸೇರಿದಂತೆ ಮೂರು ಆರೋಪಿಗಳನ್ನು ಬಂಧಿಸಿ, ಸುಮಾರು 10.5 ಕೆಜಿ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣದಲ್ಲಿ ಪ್ರಮುಖ ಮುನ್ನಡೆ ಸಾಧಿಸಿದ್ದಾರೆ.
ಈ ಕಾರ್ಯಾಚರಣೆ ಯಶಸ್ವಿಗೊಳಿಸಲು ಹಗಲು ರಾತ್ರಿ ಎನ್ನದೆ ಶ್ರಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರನ್ನು ವಿಜಯಪುರದ ನಮ್ಮ ನಿವಾಸದಲ್ಲಿ ಪುಸ್ತಕದ ಕಾಣಿಕೆ ನೀಡಿ, ಅವರಿಗೂ ಹಾಗೂ ತಂಡದಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಪೊಲೀಸರಿಗೂ ಅಭಿನಂದನೆ ತಿಳಿಸಿದರು. ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಇಂಥ ಕಾರ್ಯಾಚರಣೆಗಳು ಮಾದರಿಯಾಗಲಿದೆ ಎಂದು ಸಚಿವರು ತಿಳಿಸಿದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ