Breaking News

ಅನ್ಯ ರಾಜ್ಯಗಳ ಪೊಲೀಸ್ ಸಿಬ್ಬಂದಿಯ ಕ್ಯಾಪ್‌ ಪರಿಶೀಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​

Spread the love

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದ ಅವರು, ಮಹಾರಾಷ್ಟ್ರ, ದೆಹಲಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಕ್ಯಾಪ್‌ಗಳನ್ನು ಪರಿಶೀಲಿಸಿದರು.

ರಾಜ್ಯ ಪೊಲೀಸ್ ಕಾನ್ಸ್‌ಟೇಬಲ್‌ಗಳ ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ, ಇದುವರೆಗೂ ಬೇಡಿಕೆ ಈಡೇರಿಲ್ಲ. ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್​ ಕ್ಯಾಪ್​ ನೀಡುವುದರ ಕುರಿತು ಚರ್ಚೆ ನಡೆಸಿ ವರದಿ ನೀಡುವಂತೆ ಇತ್ತೀಚೆಗೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಪೊಲೀಸ್ ಕಿಟ್ ನಿರ್ದಿಷ್ಟತಾ ಸಮಿತಿಗೆ ಸೂಚಿಸಿದ್ದರು.

ಸ್ಲೋಚ್ ಹ್ಯಾಟ್ ಬದಲಾವಣೆಗೆ ಕಾರಣಗಳೇನು?: ಹಳೆ ಮಾದರಿಯ ಹ್ಯಾಟ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು‌ ಉಂಟಾಗುತ್ತಿವೆ ಎಂಬ ಮಾತುಗಳು ಕೇಳಿಬಂದಿವೆ. ಸ್ಲೋಚ್ ಹ್ಯಾಟ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ