Breaking News

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ

Spread the love

ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಇಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಬೆಳಗ್ಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್‌ಬಾಗ್, ಮೇಕ್ರಿ ವೃತ್ತ, ಕೆಂಪಾಂಬುಧಿ ಕೆರೆ ಹಾಗೂ ಹಲಸೂರು ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲೂಕಿನ ಕೆಂಪಾಪುರ, ದೇವನಹಳ್ಳಿ ತಾಲೂಕಿನ ಆವತಿ ಹಾಗೂ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ)ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ 7 ಪುರ ಜ್ಯೋತಿಗಳನ್ನು ಸ್ವೀಕರಿಸಲಾಯಿತು.

ಕೆಂಪೇಗೌಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ: ರಾಜ್ಯ ಸರ್ಕಾರ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮನಹಳ್ಳಿ ಬಳಿ ನೀಡಿರುವ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಆದಿ ಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಶಂಕುಸ್ಥಾಪನೆ ನೆರವೇರಿಸಿದರು.

ಸಚಿವ ಶಿವರಾಜ್ ತಂಗಡಗಿ, ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್, ಸ್ಫಟಿಕಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಶಾಸಕರಾದ ಬಾಲಕೃಷ್ಣ, ಎಸ್.ಟಿ.ಸೋಮಶೇಖರ್, ಮುನಿರತ್ನ, ಎಂಎಲ್ಸಿ ಪುಟ್ಟಣ್ಣ, ಕಾಂಗ್ರೆಸ್ ನಾಯಕರಾದ ರಘುನಂದನ್ ರಾಮಣ್ಣ, ಹನುಮಂತರಾಯಪ್ಪ, ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ