Breaking News

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರೌಢಶಾಲಾ ಸಹ ಶಿಕ್ಷಕ ಅಮಾನತು

Spread the love

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಲಬುರಗಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಇಂಗ್ಲಿಷ್​ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರನ್ನು ಕಂಪ್ಯೂಟರ್​ ಕೋಣೆಗೆ ಕರೆದು ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ ಶಿಕ್ಷಕ ಬುದ್ಧಿ ಕಲಿತಿಲ್ಲ ಎಂದು ಪೋಷಕರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಡಿಡಿಪಿಐ) ಆರೋಪಿತ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ್​ ಮದಾನೆ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಗುರುವಾರ ಸಂಜೆ 3 ಗಂಟೆ ಸುಮಾರಿಗೆ ಕಲಬುರಗಿ ದಕ್ಷಿಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ಇಂಗ್ಲಿಷ್​ ಸಹ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ, ಅನುಚಿತ ಭಾಷೆಯನ್ನು ಬಳಸಿರುವ ಬಗ್ಗೆ ಮಾಹಿತಿ ಬಂತು. ತಕ್ಷಣವೇ ನಮ್ಮ ಕಚೇರಿಯ ಹಿರಿಯ ಶಿಕ್ಷಣ ಅಧಿಕಾರಿಗಳು ಮತ್ತು ಒಬ್ಬ ಹೈಸ್ಕೂಲ್​ ಹೆಡ್​ ಮಾಸ್ಟರ್, ಲೇಡಿ ಸಬ್ಜೆಕ್ಟ್ ​​ಇನ್ಸ್​ಪೆಕ್ಟರ್​​​ ​​ಅವರನ್ನು ಒಳಗೊಂಡ ಮೂವರ ಸಮಿತಿ ರಚಿಸಿ, ವರದಿ ತರಿಸಿಕೊಂಡಿದ್ದೇನೆ. ಹಾಗೆಯೇ, ಆರೋಪಿತ ಶಿಕ್ಷಕನಿಗೆ ಗುರುವಾರವೇ 24 ಗಂಟೆಯೊಳಗೆ ತಮ್ಮ ಮೇಲೆ ಬಂದಿರುವ ದೂರಿನ ಕುರಿತು ವಿವರಣೆ ಕೊಡಬೇಕು ಎಂದು ನೋಟಿಸ್​ ನೀಡಿದ್ದೇನೆ. ಅಲ್ಲದೆ, ಅವರನ್ನು ಅಮಾನತು ಮಾಡಿ ಆದೇಶ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ