Breaking News

ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು

Spread the love

ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ 26(1)(ಕೆ) ಅಡಿ ಇದು ಉಲ್ಲಂಘನೆಯಾಗಿದ್ದು, ಆ ಇಬ್ಬರ ಸದಸ್ಯತ್ವ ರದ್ದುಗೊಳಿಸುವಂತೆ 2023ರ ನವೆಂಬರ್ 9ರಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಪಾಲಿಕೆ ಆ ಇಬ್ಬರು ಸದಸ್ಯರ ಸದಸ್ಯತ್ವ ರದ್ದು ಪಡಿಸಿದ್ದರು.

ಆದರೆ, ಪ್ರಾದೇಶಿಕ ಆಯುಕ್ತರ ಆದೇಶ ಪ್ರಶ್ನಿಸಿ ಮಂಗೇಶ ಪವಾರ ಮತ್ತು ಜಯಂತ ಜಾಧವ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ತಡೆಯಾಜ್ಞೆ ತಂದಿದ್ದರು. ಅದಾದ ಬಳಿಕ ನಡೆದ ಬೆಳವಣಿಗೆಯಲ್ಲಿ ಮಂಗೇಶ ಪವಾರ್ ಬೆಳಗಾವಿ ಮೇಯರ್ ಆಗಿ ಆಯ್ಕೆಯಾಗಿದ್ದರು.ಇನ್ನು ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆ ಪ್ರಕಾರ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ. ಜೊತೆಗೆ ಇವರು ಪ್ರತಿನಿಧಿಸುತ್ತಿದ್ದ ವಾರ್ಡ್ ನಂಬರ್ 23 ಮತ್ತು 41 ಸ್ಥಾನಗಳನ್ನು ತೆರವಾಗಿವೆ ಎಂದು ಘೋಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ