Breaking News

ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ

Spread the love

ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ
ಮಾದಕ ವಸ್ತುಗಳ ಅಕ್ರಮ ಮಾರಾಟದ ಮೇಲೆ ಬೆಳಗಾವಿ ಮಾಳಮಾರುತಿ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬೆಳಗಾವಿ ನಗರದಲ್ಲಿನ ಆರ್‌ಟಿಓ ಗೌಂಡ್, ಅಟೋನಗರದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು.
ಶ್ರೀಶೈಲ್ ಹುಲಗೇರಿ, ಪಿಎಸ್‌ಐ ಮಾಳಮಾರುತಿ ಠಾಣೆ ಮತ್ತು ಅವರ ಸಿಬ್ಬಂದಿ ತಂಡವು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಾಧಿಕ್ ಮೊಹಮ್ಮದ್ ಶರೀಫ್ ಅತ್ತಾರ್’ನನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ ಆರೋಪಿ ಮಾದಕ ವಸ್ತುಗಳನ್ನು ಲಾಭಕ್ಕಾಗಿ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.
ರೂ. 8,000/- ಮೌಲ್ಯದ 256 ಗ್ರಾಂ ಗಾಂಜಾ 25 ಸಾವಿರ ಮೌಲ್ಯದ ಬೈಕ್, 700 ರೂಪಾಯಿ ನಗದು ಮತ್ತು ಹರಿತವಾದ ಆಯುಧವನ್ನು ವಶಕ್ಕೆ ಪಡೆದುಕೊಂಡಿದ್ದಾರೆ . ಈ ಬಗ್ಗೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ದಾಳಿಯ ಯಶಸ್ಸನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಶ್ಲಾಘಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ