Breaking News

ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ

Spread the love

ವಿಜಯಪುರ…ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ
ಆ್ಯಂಕರ್: ಸಂವಿಧಾನನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ಶಬ್ದಗಳ ಕುರಿತು ಇದೀಗ ಚರ್ಚೆ‌ ಮುನ್ನಲೆಗೆ ಬಂದ ಹಿನ್ನೆಲೆಯಲ್ಲಿ ಚರ್ಚೆಗಳು ಜೋರಾಗಿ ನಡೆದಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಕೂಡಾ ಪ್ರತಿಕ್ರಿಯಿಸಿದ್ದಾರೆ. ಜಾತ್ಯತೀತ ಹಾಗೂ ಸಮಾಜವಾದಿ ಪರಿಕಲ್ಪನೆಯಡಿ ರಚನೆಯಾದ ಡಾ.ಬಾಬಾಸಾಹೇಬ ಅಂಬೇಡ್ಕ‌ರ್ ಅವರ ಸಂವಿಧಾನವನ್ನು ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದ್ದು, ಇದನ್ನು ಖಂಡಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ. ಪಾಟೀಲ ಪ್ರತಿಕ್ರಿಯಿಸಿದರು.
ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಮಾತನಾಡಿದ ಅವರು ಈ ಹಿಂದೆ ಅನಂತಕುಮಾರ ಹೆಗಡೆ ಕೇಂದ್ರ ಸಚಿವರಾಗಿದ್ದಾಗ ‘ನಾವು ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಿಸಲು’ ಎಂದಿದ್ದರು. ಇದೀಗ ದತ್ತಾತ್ರೇಯ ಹೊಸಬಾಳೆ ಅವರು ಮಾಜವಾದಿ ಮತ್ತು ಜಾತ್ಯತೀತ ಪದ ತೆಗೆದು ಹಾಕಬೇಕೆಂದಿದ್ದಾರೆ.
ಸಂವಿಧಾನ ಬದಲಿಸುವ ಹುನ್ನಾರ ಹೊರಬಿದ್ದಿದೆ ಎಂದರು. ಬಿಜೆಪಿ ಮತ್ತು ಆರ್‌ಎಸ್ಎಸ್ ಸಂವಿಧಾನದ ಆಶಯ, ಸಿದ್ಧಾಂತ ಮತ್ತು ಅಂಬೇಡ್ಕ‌ರ್ ಅವರ ವಿಚಾರಗಳಿಗೆ ವಿರುದ್ಧವಾಗಿದೆ. ಡಾ.ಅಂಬೇಡ್ಕ‌ರ್ ಅವರು ಇದೊಂದು ಪ್ರಜಾಪ್ರಭುತ್ವ ರಾಷ್ಟ್ರ ಹಾಗೂ ಜಾತ್ಯತೀತ ರಾಷ್ಟ್ರವನ್ನಾಗಿಸಿದ್ದಾರೆ. ಹೀಗಾಗಿ ಇವರಿಗೆ ಸಹಿಸಲಾಗುತ್ತಿಲ್ಲ. ಭಾರತವನ್ನು ಕೋಮುವಾದಿ ರಾಷ್ಟ್ರ ಮಾಡಲು ಹೊರಟಿದ್ದಾರೆ. ಸಂವಿಧಾನ ಬದಲಿಸುವ ಹುನ್ನಾರ ಸಹಿಸಲ್ಲ ಎಂದರು.

Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ