Breaking News

ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದಿರುವುದು

Spread the love

ಶಿವಮೊಗ್ಗ: ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಮಾಲೀಕ ನವೀನ್ ಎಂಬವರು ಹೊಸನಗರ ಠಾಣೆಗೆ ದೂರು ನೀಡಿದ್ದಾರೆ.

“ಎಂದಿನಂತೆ ನಮ್ಮ ದನಗಳನ್ನು ಮೇಯಲು ಬಿಟ್ಟಿದ್ದೆವು. ಶನಿವಾರ ಸಂಜೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿದೆ ಎಂದು ವಿಷಯ ತಿಳಿಸಿದರು. ತಕ್ಷಣ ಸ್ಥಳಕ್ಕೆ ಹೋಗಿ ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ನಮ್ಮ ದನದ ಕೆಚ್ಚಲಿನಿಂದ ರಕ್ತ ಸೋರುತ್ತಿತ್ತು. ಯಾರೋ ದನದ ಕೆಚ್ಚಲು ಕೊಯ್ದಿದ್ದಾರೆ. ನಂತರ ಗ್ರಾಮಸ್ಥರ ಸಹಾಯದಿಂದ ದನವನ್ನು ಮನೆಗೆ ತಂದು ಪಶು ವೈದ್ಯರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದೇವೆ” ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ