Breaking News

ಹಳೆ ವೈಷಮ್ಯಕ್ಕೆ ವ್ಯಕ್ತಿಯ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಮೂವರ ಬಂಧನ

Spread the love

ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬವರನ್ನು ಕೊಂದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಅವರ ಮೃತದೇಹ ಪತ್ತೆಯಾಗಿತ್ತು.

ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ, ಹತ್ಯೆಯಲ್ಲಿ ಅಂತ್ಯ: ಪತ್ನಿಯಿಂದ ದೂರವಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು ಕಾಲ ಕಳೆಯುತ್ತಿದ್ದರು. ಕೆಲದಿನಗಳ ಹಿಂದೆ ಆರೋಪಿ ಪ್ರೇಮ್ ಹಾಗೂ ಆಂಜಿನಪ್ಪನ ನಡುವೆ ಕುರಿ ಮೇಯಿಸುವಾಗ ಗಲಾಟೆಯಾಗಿತ್ತು. ಜೂನ್ 23ರಂದು ಆರೋಪಿಗಳು ಮದ್ಯಪಾನ ಮಾಡಿ ತೆರಳುವಾಗ ಆಕಾಶವಾಣಿ ಲೇಔಟ್ ಬಳಿ ಆಂಜಿನಪ್ಪ ಎದುರಾಗಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ