Breaking News

ಶಿರಸಿ-ಕುಮಟಾ ಹೆದ್ದಾರಿ ನಿರ್ಮಾಣಕ್ಕೆ ದಿನಾಂಕ ನಿಗದಿ

Spread the love

ಉತ್ತರ ಕನ್ನಡ, ಜೂನ್​ 29: ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ (Sirasi-Kumata National Highway) ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರೊಬ್ಬರು ಬರೆದ ಪತ್ರಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಉತ್ತರ ನೀಡಿದ್ದು, ಕಾಮಗಾರಿ 2025ರ ಡಿಸೆಂಬರ್​ 31 ರಂದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ.

ಸಾರ್ವಜನಿಕರೊಬ್ಬರು ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದು, ತಮ್ಮ ಕಾರಿನಲ್ಲಿ ಶಿರಸಿ-ಕುಮಟಾ ಪ್ರಯಾಣಿಸಲು ಆಹ್ವಾನ ನೀಡಿದ್ದರು.ಆದರೆ, ಇವರ ಆಹ್ವಾನಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರತಿಕ್ರಿಯೆ ನೀಡಿದ್ದು, “ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುವ ಹೊಸ ಗಡುವಿನ ದಿನಾಂಕವನ್ನು 2025ರ ಡಿಸೆಂಬರ್​ 31 ಅಂತ ನಿರ್ಧರಿಸಲಾಗಿದೆ” ಎಂದು ಉತ್ತರ ನೀಡಲಾಗಿದೆ.

“ನಾನು ಬರೆದ ಪತ್ರಕ್ಕೆ ಮಂತ್ರಿಗಳ ಕಾರ್ಯಾಲಯ ಪ್ರತಿಕ್ರಿಯಿಸದೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ (PIU-Honnavar) ಉತ್ತರ ನೀಡಿರುವುದು ಏಕೆ ಎಂಬುದು ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ