Breaking News

ಹೃದಯಾಘಾತದಿಂದ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್

Spread the love

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯೂರಿಟಿಗಾರ್ಡ್ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು, ಹೃಅದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಚೇರ್ ಮೇಲೆ ಕುಳಿತಿದ್ದಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋ ರೂಂ ನಲ್ಲಿ ನಡೆದಿದೆ.

ಶಿವಾನಂದ್ (55) ಹೃದಯಾಘಾತದಿಂದ ಸಾವನ್ನಪ್ಪಿರುವ ಸೆಕ್ಯೂರಿಟಿ ಗಾರ್ಡ್. ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋರೂಂ ನಲ್ಲಿ ಈ ದುರಂತ ಸಂಭವಿಸಿದೆ.

ಹಿರೇಗೌಜ ಗ್ರಾಮದ ನಿವಾಸಿಯಾಗಿದ್ದ ಶಿವಾನಂದ್, 6 ತಿಂಗಳ ಹಿಂದಷ್ಟೇ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದರು. ಇಂದು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಮ್ಮ ಚೇರ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ