Breaking News

ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್

Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಮ್ಮ (ಕಾಂಗ್ರೆಸ್​ನ) ಶಕ್ತಿ ಏನಿತ್ತು ಎಂದು ನಿಮಗೆಲ್ಲರಿಗೂ ತಿಳಿದಿದೆ. ಈ ವಿಜಯವನ್ನು ಸಾಧಿಸಲು ಯಾರು ಹೋರಾಟ, ಬೆವರು ಸುರಿಸಿದರು ಮತ್ತು ಶ್ರಮ ಹಾಕಿದರು ಅನ್ನೋದು ಎಲ್ಲರಿಗೂ ತಿಳಿದಿದೆ. ಅವರ (ಶಿವಕುಮಾರ್) ತಂತ್ರ ಮತ್ತು ಕಾರ್ಯಕ್ರಮಗಳು ಈಗ ಇತಿಹಾಸ ಎಂದರು.

“ನಾನು ಊಹಾಪೋಹಗಳನ್ನು ನಂಬುವುದಿಲ್ಲ. ಹೈಕಮಾಂಡ್​ಗೆ ಸದ್ಯದ ಪರಿಸ್ಥಿತಿಯ ಬಗ್ಗೆ ತಿಳಿದಿದೆ ಮತ್ತು ಡಿ.ಕೆ. ಶಿವಕುಮಾರ್​ ಅವರಿಗೆ ಅವಕಾಶ ನೀಡಲು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಮಗೆ ಸಂಪೂರ್ಣ ವಿಶ್ವಾಸವಿದೆ” ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಈ ವರ್ಷ ಮುಖ್ಯಮಂತ್ರಿಯಾಗುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಹೌದು, ನಾನು ಹೇಳುತ್ತಿದ್ದೇನೆ. ಸೆಪ್ಟೆಂಬರ್ ನಂತರ ಕ್ರಾಂತಿಕಾರಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೆಲವು ನಾಯಕರು ಸುಳಿವು ನೀಡುತ್ತಿದ್ದಾರೆ. ಎರಡ್ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಾನು ಅದನ್ನೇ ಹೇಳುತ್ತಿದ್ದೇನೆ. ನಾನು ನೇರವಾಗಿ ಮಾತನಾಡುತ್ತಿದ್ದೇನೆ ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ