Breaking News

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the love

ಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ ಎಂದು ಬೆನ್ನು ತಟ್ಟಿಕೊಂಡರು.

92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಆರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಕೃಷ್ಣರಾಜಸಾಗರದ ಒಟ್ಟು 124 ಅಡಿಯದಾಗಿದ್ದು, 49 TMC ನೀರಿನ ಸಾಮರ್ಥ್ಯವಿದೆ. 93 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023 – 24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ಪ್ರಕೃತಿಯ ನಿಯಮದಂತೆ ಎಲ್ಲಾ ನಡೆಯುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು.

ಕಾವೇರಿ ಜಲಾನಯನ ಪ್ರದೇಶದ ನಾಲೆ, ಅಣೆಕಟ್ಟು ಹಾಗೂ ಇತರ ಅಭಿವೃದ್ಧಿಗಾಗಿ ಕಾವೇರಿ ನೀರವಾರಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಅಧಿಕಾರದಲ್ಲಿದ್ದಾಗ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲ ಜಲಾಶಯಗಳೂ ತುಂಬಿವೆ. ಎಲ್ಲ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ.

ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿ- ಅಂಶಗಳನ್ನು ನೋಡಿದರೆ ತಿಳಿಯುತ್ತದೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ