ರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. ತಕ್ಷಣವೇ ರೈಲು ನಿಲ್ಲಿಸಿದ ಪೈಲಟ್ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ (ಹಿಂದಿನ ರಾಮನಗರ) ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಮೈಸೂರಿನಿಂದ ರಾಜಸ್ಥಾನದ ಉದಯಪುರಕ್ಕೆ ರೈಲು ತೆರಳುತ್ತಿತ್ತು. ಈ ವೇಳೆ ರೈಲಿನ ಇಂಜಿನ್ನಲ್ಲಿ ಹಠಾತ್ ಬೆಂಕಿ ಕಾಣಿಸಿದೆ. ಮುಂದಿನ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಲ್ಲಿಸಿದ್ದಾನೆ.
Laxmi News 24×7