ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ
ಚಿಕ್ಕೋಡಿ: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಅವರು ಆಸ್ಪತ್ರೆಗೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಒಳ ರೋಗಿಗಳ ಕೊಣೆ ಕಂಡು ಕೆಂಡಾ ಮಂಡಲವಾದರು.
ಶುಚಿತ್ವ ಕಾಪಾಡದ ಹಿನ್ನಲೆ ಮುಖ್ಯ ವೈಧ್ಯಾಧಿಕಾರಿಯನ್ನ ತರಾಟೆಗೆ ತೆಗೆದುಕೊಂಡರು.
ಸಿಬ್ಬಂದಿಗಳು ಹಾಗೂ ರೋಗಿಗಳು ತಮ್ಮ ಅಳಲನ್ನ ನಾಗಲಕ್ಷ್ಮೀ ಅವರ ಮುಂದೆ ತೋಡಿಕೊಂಡರು.
ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕಿ ಹಾಗೂ ಆಸ್ಪತ್ರೆ ಅವ್ಯವಸ್ಥೆ ಕುರಿತು ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ನಾಗಲಕ್ಷ್ಮೀ ತಿಳಿಸಿದರು.