Breaking News

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the love

ಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ‌ಮಂಡಿಸಲು ಮುಂದಾಗಿದೆ. ಪ್ರಸ್ತಾಪಿತ ಮಸೂದೆಯಲ್ಲೇನಿದೆ ಎಂಬ ವಿಶೇಷ ವರದಿ ಇಲ್ಲಿದೆ.

ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ರಾಜ್ಯಾದ್ಯಂತ ಯುವ ಜನಾಂಗದ ಬದುಕನ್ನೇ ಕಸಿಯುತ್ತಿದೆ. ಅದೆಷ್ಟು ಮಂದಿ ಈ ಆನ್​ಲೈನ್ ಬೆಟ್ಟಿಂಗ್ ಆಟಕ್ಕೆ ಸಿಲುಕಿ ಕೋಟ್ಯಾಂತರ ರೂ. ಸಾಲ ಮಾಡಿ ಕೊನೆಗೆ ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಆನ್​ಲೈನ್ ಬೆಟ್ಟಿಂಗ್ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ‌.

ಯುವ ಜನಾಂಗವನ್ನು ಸಾಲದ ಶೂಲಕ್ಕೆ ಸಿಲುಕಿಸಿ ಜೀವನವನ್ನೇ ಕಸಿಯುತ್ತಿರುವ ಈ ಪಿಡುಗಿಗೆ ಅಂಕುಶ ಹಾಕುವಂತೆ ಸಾರ್ವಜನಿಕ ವಲಯದಿಂದ ಸಾಕಷ್ಟು ಒತ್ತಾಯ ಕೇಳಿ ಬರುತ್ತಲೇ ಇದೆ. ಇತ್ತ ಪಕ್ಷಾತೀತವಾಗಿ ಅಧಿವೇಶನಗಳಲ್ಲಿ ಶಾಸಕರು ಇದಕ್ಕೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತಲೇ ಬರುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಆನ್​ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಕಠಿಣ ಕಾನೂನು ರೂಪಿಸಿದೆ.

ಆನ್​ಲೈನ್ ಬೆಟ್ಟಿಂಗ್​ಗೆ ನಿಷೇಧ: ರಾಜ್ಯ ಸರ್ಕಾರ ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ಹಾವಳಿಗೆ ಕಡಿವಾಣ ಹಾಕಲು ಇದೀಗ ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ. ಈ ಕರಡು ಪ್ರತಿ ಈ ಟಿವಿ ಭಾರತ್​ಗೆ ಲಭ್ಯವಾಗಿದ್ದು, ಮುಂದಿನ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ. ಈ ಮೂಲಕ ಬಹುಬೇಡಿಕೆಯ ಆನ್​ಲೈನ್ ಬೆಟ್ಟಿಂಗ್​ಗೆ ಕಡಿವಾಣ ಹಾಕುವ ಕಾನೂನು ಜಾರಿಗೆ ತರಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.‌

ಈ ಪ್ರಸ್ತಾವಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆ ಅಥವಾ ಕ್ರಿಯೆಯ ಫಲಿತಾಂಶಗಳು ಬಹುವಾಗಿ ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್​ಲೈನ್ ಗ್ಯಾಂಬ್ಲಿಂಗ್​, ಬೆಟ್ಟಿಂಗ್ ಅಥವಾ ಪಂತ ಕಟ್ಟುವ ಚಟುವಟಿಕೆಗಳು ನಿಷಿದ್ಧವಾಗಿವೆ.

ಬಹುವಾಗಿ ಅದೃಷ್ಟದ ಮೂಲಕ ಫಲಿತಾಂಶ ಹೊರಹೊಮ್ಮುವ ಆನ್​ಲೈನ್ ಬೆಟ್ಟಿಂಗ್ ಅಂದರೆ ಯಾವುದೇ ರೀತಿಯಲ್ಲಿ ಪಂತ ಕಟ್ಟುವುದು, ಹಣ ಇಡುವುದು, ಟೋಕನ್, ವರ್ಚುವಲ್ ಕರೆನ್ಸಿ ಅಥವಾ ಇ-ಫಂಡುಗಳನ್ನು ಇಟ್ಟು ಅಂತರ್ಜಾಲ, ಮೊಬೈಲ್ ಆಪ್ ಅಥವಾ ಇತರೆ ಡಿಜಿಟಲ್ ವೇದಿಕೆಗಳ ಮೂಲಕ ಆಡುವ ಆಟವನ್ನು ನಿಷೇಧಿಸಲಾಗುತ್ತದೆ. ಜೊತೆಗೆ ನೋಂದಾಯಿತವಲ್ಲದ ವೇದಿಕೆಗಳ ಮೂಲಕ ಇಂಥ ಆನ್​ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್​ ಸೇವೆ ಕೊಡುವುದನ್ನು ಈ ಹೊಸ ಮಸೂದೆ ನಿಷೇಧಿಸುತ್ತದೆ.‌


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ