Breaking News

ಮಧ್ಯರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡಿದ ಆರೋಪಿಗಳ ಬಂಧನ

Spread the love

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದಿದ್ದ ಎರಡು ಪ್ರಮುಖ ಅಪರಾಧ ಪ್ರಕರಣಗಳನ್ನು ಸಿನಿಮೀಯ ಶೈಲಿಯಲ್ಲಿ ಭೇದಿಸಲಾಗಿದೆ. ಮಧ್ಯರಾತ್ರಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿದ್ದ ದರೋಡೆ ಪ್ರಕರಣವನ್ನು ಪತ್ತೆದಾರಿ ಶ್ವಾನ ನೀಡಿದ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.KALABURAGI  ದರೋಡೆ  CRIME  ROBBERY CASE

ಜೂನ್​​ 22ರಂದು ಶಹಬಾದ್​​​ ಪಟ್ಟಣದ ಧಕ್ಕಾ ತಾಂಡಾದಲ್ಲಿ ಹಣಮಂತ ಪವಾರ್​​ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು, ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರ ಕೈ-ಕಾಲು ಕಟ್ಟಿ ₹15,26,500 ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಶಹಬಾದ್​​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಪೊಲೀಸರು ಡಾಗ್​​​​ ಸ್ಕ್ವಾಡ್​ನ ಶ್ವಾನ ‘ರೂಬಿ’ ನೆರವಿನಿಂದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಈ ಎಲ್ಲ ವಸ್ತುಗಳು ವಶ: ಬಂಧಿತರಾದ ರವಿ ರಾಠೋಡ್​​, ಶಿವಕುಮಾರ್​​, ಮಹಾದೇವ ಮತ್ತು ಗೋಪಾ​ಲ್​ ಅವರಿಂದ 135 ಗ್ರಾಂ ಚಿನ್ನ, 550 ಗ್ರಾಂ ಬೆಳ್ಳಿ ಮತ್ತು ₹40,000 ನನದು ವಶಪಡಿಸಿಕೊಳ್ಳಲಾಗಿದೆ. ಪತ್ತೆದಾರಿ ಶ್ವಾನ ರೂಬಿಯ ನಿಖರ ಸುಳಿವಿನಿಂದ ಈ ಮಹತ್ವದ ದರೋಡೆ ಪ್ರಕರಣ ಭೇದಿಸಲಾಗಿದ್ದು , ರೂಬಿಗೆ ಹಾಗೂ ಪೊಲೀಸ್​ ಸಿಬ್ಬಂದಿಗೆ ಎಸ್.ಪಿ. ಅಡ್ಡೂರ್ ಶ್ರೀನಿವಾಸಲು ಅವರು ಶ್ಲಾಘನೆ ಪತ್ರ ನೀಡಿ ಗೌರವಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ