Breaking News

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ

Spread the love

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ

ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು.

ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕುತ್ತಿದ್ದಳು. ಬಳಿಕ ಅವರನ್ನ ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದಳು.ಅಮೆರಿಕದಿಂದ (USA) ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿದ್ದಾಳೆ. ಈ ಸಂಬಂಧ ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನವಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದಳು. ಬಳಿಕ ಸವಿತಾ ಮತ್ತದೇ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದು, ಇದೀಗ ಬಸವೇಶ್ವರ ನಗರ ಪೊಲೀಸರ ಅತಿಥಿಯಾಗಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ