Breaking News

ಭಾರಿ ಮಳೆಗೆ ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ !!!

Spread the love

ಭಾರಿ ಮಳೆಗೆ ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ !!!
ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆ ಭೀತಿ ಹೆಚ್ಚುತ್ತಿದೆ.
ಕೃಷ್ಣಾ ನದಿಗೆ ಈಗ 1 ಲಕ್ಷ 7 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಆಲಮಟ್ಟಿಯ ಹಿನ್ನೀರು ಮಟ್ಟ ದಿನದಿಂದ ದಿನಕ್ಕೆ ಏರುತ್ತಿದೆ. ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ.
ಘಟಪ್ರಭಾ ನದಿಗೂ ಈಗ 15 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ನದಿ ತೀರದ ಗ್ರಾಮಗಳಿಗೆ ಬಾಗಲಕೋಟೆ ಜಿಲ್ಲಾಡಳಿತ ಎಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಜಮಖಂಡಿ, ಮುಧೋಳ ಹಾಗೂ ರಬಕವಿ ಬನಹಟ್ಟಿ ತಾಲ್ಲೂಕುಗಳಿಗೆ ಸೂಚನೆ ನೀಡಲಾಗಿದೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ