Breaking News

ಅಝಮ್ ನಗರ ಸರ್ಕಾರಿ ಉರ್ದು ಶಾಲೆಗೆ “ನಗರದ ಅತ್ಯುತ್ತಮ ಶಾಲೆ” ಪುರಸ್ಕಾರ

Spread the love

ಅಝಮ್ ನಗರ ಸರ್ಕಾರಿ ಉರ್ದು ಶಾಲೆಗೆ “ನಗರದ ಅತ್ಯುತ್ತಮ ಶಾಲೆ” ಪುರಸ್ಕಾರ
ಬೆಳಗಾವಿ ನಗರದಲ್ಲಿರುವ ಅಝಮ್ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ.11 ಇತ್ತೀಚೆಗೆ ಶಿಕ್ಷಣ ಇಲಾಖೆಯಿಂದ “ನಗರದ ಅತ್ಯುತ್ತಮ ಶಾಲೆ” ಎಂಬ ಪ್ರಶಸ್ತಿ ಪಡೆಯುವ ಮೂಲಕ ಹೆಮ್ಮೆಪಡುವಂತಹ ಸಾಧನೆ ಮಾಡಿದೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಯು ಪ್ರಶಂಸನೀಯವಾಗಿದ್ದು, ಈ ಸಾಧನೆಗೆ ಶಿಕ್ಷಣ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಳಗಾವಿಯ ಉತ್ತರ ಶಾಸಕರಾದ ಆಸೀಫ್ ಸೇಠ್ ಅವರು ಭಾಗವಹಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶಮೀಮ್ ಮುಲ್ಲಾಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ವಿತರಿಸಿದರು.
ಶಾಸಕರಾದ ಆಸೀಫ್ ಸೇಠ್ ಅವರು ಶಾಲಾ ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಸದಸ್ಯರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಶ್ರಮದಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ವಸೀಮ್ ವತನದಾರ್ ,ಸಾಮಾಜಿಕ ಕಾರ್ಯಕರ್ತ ಇಮ್ರಾನ್ ಫತೇಖಾನ್, ಬಿಆರ್‌ಸಿ ಹಿರೇಮಠ್, ಬಿಆರ್‌ಪಿ ರಿಝ್ವಾನ್ ನಾವಗೇಕರ್, ಸಿಆರ್‌ಪಿ ಇಂದ್ರಾ ಕಾಳೆ, ಬಾಬಾಜಾನ್ ಪಠಾನ್ ಮತ್ತು ಅಫ್ತಾಬ್ ಬನೇದಾರ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ