Breaking News

*ಯುವತಿಯರ ಫೋಟೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್

Spread the love

ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ.ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಬಗ್ಗೆ ಯುವತಿಯೊಬ್ಬಳು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ