Breaking News

ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ

Spread the love

ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಥೋಡ ತಿಳಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜನರನ್ನು ಬಂಧಿಸಿ 10.75 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಮೂರು ಜನರನ್ನು ಬಂಧಿಸಿ ಅವರನ್ನು ವಿಚಾರಿಸಿ ತನಿಖೆ ನಡೆಸಿ ಇಲ್ಲಿಯ ವರೆಗೆ 15 ಜನರ ಆರೋಪಿಗಳ ಬಂಧನವಾಗಿದೆ ಎಂದರು.
ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್‌ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಬಂಧಿತ ಆರೋಪಿಗಳು. ಬಂಧಿತರು ಹುಬ್ಬಳ್ಳಿ ಮೂಲದವರು. ಅಲ್ಲದೇ ಈ ಹಿಂದೆ ಮೂವರು ಆರೋಪಿಗಳ ಬಂಧನ ಮಾಡಲಾಗಿತ್ತು.
ಇದೀಗ್ ಬಂಧಿತ ಆರೋಪಿಗಳಿಂದ 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿದಂತೆ 39.26 ಕೋಟಿ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ