Breaking News

ಧರ್ಮ, ಜಾತಿಯ ಭೇದಗಳಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು- ಮಹಾಪೌರ ಜ್ಯೋತಿ ಪಾಟೀಲ.

Spread the love

ಧರ್ಮ, ಜಾತಿಯ ಭೇದಗಳಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು- ಮಹಾಪೌರ ಜ್ಯೋತಿ ಪಾಟೀಲ.
ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ಇರುವದರಿಂದ ಯಾವುದೇ ರೀತಿಯ ಧರ್ಮ, ಜಾತಿ, ಮತ, ಪಂಥಗಳ ಭೇದವಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ವಿನಯ ಪಾಟೀಲ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ, ಮಾತನಾಡಿದರು ಅವರು, ಹಡಪದ ಸಮಾಜವು ಸಣ್ಣ ಸಮುದಾಯವಾಗಿದ್ದರೂ, ದೊಡ್ಡ ಸಂಘಟನೆಯಾಗಿ ಸಮಾಜದಲ್ಲಿ ಬೆಳೆದಿರುವುದು ಒಂದು ಸಂತಸದ ಸಂಗತಿಯಾಗಿದೆ.
ಶರಣ ಪರಂಪರೆಯ ಅಗ್ರಗಣ್ಯ ಶರಣರಾದ ಹಡಪದ ಅಪ್ಪಣ್ಣನವರು ಕಾಯಕ ಯೋಗಿಯಾಗಿ ಅನೇಕ ಅನುಭವದ ವಚನಗಳನ್ನು ಬರೆದಿದ್ದಾರೆ. ಅವರ ವಚನಗಳ ಸಾರದ ಹಿನ್ನಲೆಯಲ್ಲಿ ಯಾವುದೇ ಸಮಾಜವಿರಲಿ, ಧರ್ಮವಿರಲಿ, ಜಾತಿ ಇರಲಿ ಎಲ್ಲರನ್ನೂ ಸಮಾನರಂತೆ ಕಾಣಬೇಕು. ಬಸವಣ್ಣನವರ ಕಾಲಮಾನದಲ್ಲಿ ಇದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರು ಇತರರಿಗೆ ಮಾದರಿಯಾಗಿದ್ದರು ಎಂದು ಹೇಳಿದರು.
ಇದೇವೇಳೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, 12ನೇ ಶತಮಾನ ಅಂದರೆ ನಮಗೆ ಎಲ್ಲ ವಚ
ನಕಾರರು ನೆನಪಾಗುತ್ತಾರೆ. ಯಾವುದೇ ಜಾತಿ, ಧರ್ಮ, ಮತ, ಪಂಥ ಎನ್ನದೆ ಸರ್ವಧರ್ಮ ಸರ್ವಪಾಲು ಎಂದು ಶರಣರೆಲ್ಲಾ ಜೀವನ ನಡೆಸಿದವರು. ನಮ್ಮ ಮಹಾನ ದರ್ಶನಿಕರು, ಅವರು ಹೇಳುವ ವಚನಗಳು ನಮ್ಮ ಜೀವನಕ್ಕೆ ಧೇಯ್ಯ ವಾಕ್ಯಗಳಾಗಿವೆ.
ಜನಸಾಮಾನ್ಯರ ಜೀವನ ಮಟ್ಟವನ್ನು ಉನ್ನತ ಮಾಡುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ನಡೆಸಿದವರು. ಅವರು ಜನರಲ್ಲಿ ಶ್ರದ್ಧೆ, ನೀತಿ, ಮತ್ತು ಶುದ್ಧ ಜೀವನವನ್ನು ಪ್ರಚೋದಿಸಿದರು. ಕರ್ಮ ಮತ್ತು ಭಕ್ತಿಯ ಸಂಯೋಜನೆಯ ಮೂಲಕ ಸಮುದಾಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹರಡಿಸಿದರು ಎಂದು ತಿಳಿಸಿದರು‌. ಕಾರ್ಯಕ್ರಮದಲ್ಲಿ ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸೆಡರಿ ಸಮಾದ ಮುಖಂಡರು ಉಪಸ್ಥಿತರಿದ್ದು, ಇದೇವೇಳೆ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪಿಯುಸಿಯಲ್ಲಿ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ